
ಬೆಳಗಾವಿಯ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನಕಲುಕುವ ದುರಂತ ಸಂಭವಿಸಿದ್ದು, ಪ್ರೇಮದ ಹೆಸರಿನಲ್ಲಿ ಹಿಂಸೆಗೊಳಗಾದ 16 ವರ್ಷದ ಅಪ್ರಾಪ್ತ ಬಾಲಕಿ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯುವಕನ ಕಾಟ ತಾಳಲಾರದೆ ಬೇಸರಗೊಂಡ ಬಾಲಕಿ
ಸಿದ್ದಲಿಂಗ ಪೂಜಾರಿ ಎಂಬ ಯುವಕ ನಿರಂತರವಾಗಿ ಬಾಲಕಿಯನ್ನು ಪ್ರೀತಿಸಲು ಒತ್ತಾಯಿಸುತ್ತಿದ್ದ. ಅವನ ಕಿರುಕುಳ ತಾಳಲಾರದೇ, ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬೆಂಕಿ ಹಚ್ಚಿಕೊಂಡಿದ್ದಾಳೆ. ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆಕೆಯನ್ನು ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.
ಆರೋಪಿ ಬಂಧನ
ಘಟನೆಯ ಕುರಿತು ಮಾಹಿತಿ ಪಡೆದ ಘಟಪ್ರಭಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಸಿದ್ದಲಿಂಗ ಪೂಜಾರಿಯನ್ನು ಬಂಧಿಸಿದ್ದಾರೆ. ಈ ಘಟನೆ ಪ್ರೇಮದ ಹೆಸರಿನಲ್ಲಿ ನಡೆಯುವ ಅಮಾನವೀಯ ಕಿರುಕುಳಗಳ ಬಗ್ಗೆ ತೀವ್ರ ಚರ್ಚೆ ಹುಟ್ಟಿಸಿದೆ.