ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ಇಂದು ನಡೆದ ಮಹತ್ವದ ಸಭೆ ಬಳಿಕ ಸಚಿವರು ಮಾತನಾಡಿದರು. ಪರೀಕ್ಷೆ ಸುಗಮವಾಗಿ ನಡೆಯಲು, ಮೌಲ್ಯಮಾಪನ ಪ್ರಕ್ರಿಯೆ ಹಾಗೂ ಫಲಿತಾಂಶ ಘೋಷಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಮೇ ಮೊದಲ ವಾರದಲ್ಲಿ ‘ದ್ವಿತೀಯ ಪಿಯುಸಿ’ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿವೆ. ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ಈ ವ್ಯವಸ್ಥೆ ಮಾಡಿದ್ದೇವೆ. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 5,716 ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬಂದ್ರೆ ಪ್ರವೇಶವಿಲ್ಲ ಸಮವಸ್ತ್ರ ಕಡ್ಡಾಯ ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗೆ 726195 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಒಟ್ಟು 5716 ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದ್ದು, 1109 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 1109 ಸಹ ಅಧೀಕ್ಷಕರು. 64 ಜಿಲ್ಲಾ ಜಾಗೃತ ದಳ. 525 ತಾಲೂಕು ಜಾಗೃತ ದಳ, 2373 ವಿಶೇಷ ಜಾಗೃತ ದಳ ಕರ್ತವ್ಯ ನಿರ್ವಹಿಸಲಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ
*ದಿನಾಂಕ 09-03-2023, ಗುರುವಾರ – ಕನ್ನಡ, ಅರೇಬಿಕ್
*ದಿನಾಂಕ 11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
*ದಿನಾಂಕ 13-03-2023, ಸೋಮವಾರ – ಅರ್ಥಶಾಸ್ತ್ರ
*ದಿನಾಂಕ 14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
*ದಿನಾಂಕ 15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
*ದಿನಾಂಕ 16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
*ದಿನಾಂಕ 17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
*ದಿನಾಂಕ 18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ
*ದಿನಾಂಕ 20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ
*ದಿನಾಂಕ 21-03-2023, ಮಂಗಳವಾರ – ಹಿಂದಿ
*ದಿನಾಂಕ 23-03-2023, ಗುರುವಾರ – ಇಂಗ್ಲೀಷ್
*ದಿನಾಂಕ 25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
*ದಿನಾಂಕ 27-03-2023, ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
*ದಿನಾಂಕ 29-03-2023, ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ