ನಂಜನಗೂಡು: ತಾಲೂಕಿನ ಅಂಬಳೆ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಸಾಲಕ್ಕೆ ಹೆದರಿ ಮಹಿಳೆಯೊಬ್ಬರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಜಯಶೀಲ (53) ಆತ್ಮಹತ್ಯೆ ಮಾಡಿಕೊಂಡವರು. ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಗಳಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಣೆಗೆ ಸುಮಾರು 5 ಲಕ್ಷ ರೂ. ಸಾಲ ಪಡೆದಿದ್ದರು ಎನ್ನಲಾಗಿದೆ. ಪ್ರತಿ ತಿಂಗಳು 20 ಸಾವಿರ ರೂ.ಗೂ ಹೆಚ್ಚು ಕಂತು ಕಟ್ಟಬೇಕಾಗಿತ್ತು. ಸಾಲದ ಮೇಲೆ ಖರೀದಿಸಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಜೀವನ ನಿರ್ವಹಣೆ ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿ ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಒದ್ದಾಡುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಕುಟುಂಬಸ್ಥರಿಗೆ ಮಾಹಿತಿ ನೀಡುವಷ್ಟರಲ್ಲಿ ಜಯಶೀಲ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕೆಲವು ಮೈಕ್ರೋ ಫೈನಾನ್ಸ್ ಹಾವಳಿಗಳಿಂದ ಸಾಲಗಾರರು ಗ್ರಾಮಗಳನ್ನು ತೊರೆಯುತ್ತಿದ್ದಾರೆ ಎಂದು ಮೈಕ್ರೋ ಫೈನಾನ್ಸ್ ವಿರುದ್ಧ ಭ್ರಷ್ಟರ ಬೇಟೆ ಪತ್ರಿಕೆಯು ಸಮಗ್ರ ವರದಿಯನ್ನು ಮಾಡಿದ್ದು ದ್ದನ್ನು ಸ್ಮರಿಸಬಹುದು. ವರದಿ: ಮೋಹನ್

Leave a Reply

Your email address will not be published. Required fields are marked *

error: Content is protected !!