ಯಲ್ಲಾಪುರದಲ್ಲಿ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಇಡಗುಂದಿ ಗ್ರಾಮಪಂಚಾಯತ ವ್ಯಾಪ್ತಿಯ ದೋಣಗಾರ ಗ್ರಾಮದಲ್ಲಿ 40 ಲಕ್ಷ ರೂಪಾಯಿ ವೆಚ್ಚದಲ್ಲಿ ದೋಣಗಾರ – ಗುಡೆಪಾಲ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.
ನಂತರ 1 ಕೋಟಿ ರೂಪಾಯಿ ವೆಚ್ಚದಲ್ಲಿ ಏಕಾನ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು ಮೂಲಕವಾಗಿ ಚಾಲನೆ ನೀಡಿ, ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಹಿರಿಯರು ಹಾಗೂ ಗ್ರಾಮಪಂಚಾಯತ ಸದಸ್ಯರಾದ ಶ್ರೀಕಾಂತ ಶೆಟ್ಟಿ, ಮಂಡಲ ಖಜಾಂಚಿ ಮುರಳಿ ಹೆಗಡೆ,ಪ್ರಮುಖರಾದ ವಿ.ಎನ್.ಭಟ್ ಏಕಾನ್, ಗಣಪತಿ ಮುದ್ದೇಪಾಲ, ತಾಲೂಕಾ ಪಂಚಾಯತ ಮಾಜಿ ಅಧ್ಯಕ್ಷರಾದ ಚಂದ್ರಕಲಾ ಭಟ್ ಸೇರಿದಂತೆ ಗ್ರಾಮಪಂಚಾಯತ ಅಧ್ಯಕ್ಷರು, ಸದಸ್ಯರು, ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ ಶ್ರೀಪಾದ್:ಎಸ್ ಏಚ್